ಕೇದರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ತೀವ್ರ ಅಸ್ವಸ್ಥಗೊಂಡು ಸಾವು…

58
firstsuddi

ಚಿಕ್ಕಮಗಳೂರು: ಕೇದರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗಿರೀಶ್(25) ಕೇದರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಿವಾಸಿಯಾಗಿರುವ ಗಿರೀಶ್, ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದನು.

ಗಿರೀಶ್ ಕಳೆದ ವಾರ ಮೂಡಿಗೆರೆಯಿಂದ ಕೇದರನಾಥ ಯಾತ್ರೆಗೆ ತೆರಳಿದ್ದ. ಈ ವೇಳೆ ಆತ ಕೇದರನಾಥದಲ್ಲಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ಬಳಿಕ ಸ್ಥಳೀಯರು ಆತನನ್ನು ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪಿದ್ದಾನೆ.

ಘಟನೆ ಬಗ್ಗೆ ಗಿರೀಶ್ ಕುಟುಂಬಸ್ಥರಿಗೆ ಕೇದಾರನಾಥ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಗಿರೀಶ್ ಮೃತದೇಹ ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿದೆ. ಮಗನ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.