ಮೋದಿಯನ್ನು ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸಿದ್ದರಾಮಯ್ಯ.

60
firstsuddi

ನವದೆಹಲಿ: ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾಸಿದರು. 

ತಮ್ಮ ಜನ್ಮದಿನದಂದೇ ಸಿದ್ದರಾಮಯ್ಯನವರು ಇಂದು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಪ್ರಧಾನಿ ಮೋದಿ ಅವರ ಬಳಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೋದಿಯವರನ್ನು ಭೇಟಿ ಮಾಡಿದ ಬಳಿಕ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿಕೊಂಡರು.

ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.