ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್ ಆತ್ಮಹತ್ಯೆ…

55
firstsuddi

ಚಿಕ್ಕಬಳ್ಳಾಪುರ: ಬಿಎಂಟಿಸಿ ಬಸ್ ಡಿಪೋದಲ್ಲಿ ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದಿದೆ.

ಆವತಿ ಗ್ರಾಮದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕ. ಇವರು ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಡಿಪೋಗೆ ಆಗಮಿಸಿದ ನಾಗೇಶ್ ಡಿಪೋ ಮ್ಯಾನೇಜರ್ ಕಚೇರಿ ಎದುರೇ ನೇಣಿಗೆ ಶರಣಾಗಿದ್ದಾರೆ. ಬೆಳಗ್ಗೆ ಸಿಬ್ಬಂದಿಗಳು ನೋಡಿ, ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗೇಶ್ ಕೆಲಸಕ್ಕೆ ಪದೇ ಪದೇ ರಜೆ ಹಾಕುತ್ತಿದ್ದ ಎನ್ನಲಾಗಿದ್ದು, ಈ ಕಾರಣಕ್ಕೆ ಕಳೆದ 15 ದಿನಗಳಿಂದ ಕೆಲಸಕ್ಕೆ ಹಾಜರಾದರೂ ನಾಗೇಶ್‌ಗೆ ಕೆಲಸ ಕೊಟ್ಟಿರಲಿಲ್ಲ. ಇದರಿಂದ ಮನನೊಂದು ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಗೇಶ್ ಸಹೋದ್ಯೋಗಿಗಳು ಆರೋಪಿಸಿದ್ದಾರೆ.

ಘಟನೆ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.