ಹೃದಯಾಘಾತದಿಂದ ಮಲಯಾಳಂ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಸಿದ್ದಿಕಿ ನಿಧನ…

69
firstsuddi

ಮಲಯಾಳಂ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಸಿದ್ದಿಕಿ ತೀವ್ರ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.

ನ್ಯುಮೋನಿಯಾ ಮತ್ತು ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದಿಕಿ ಅವರಿಗೆ ಸೋಮವಾರ ಸಂಜೆ ವೇಳೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಕ್ಸ್ ಟ್ರಾಕಾರ್ಪೋರಿಯಲ್ ಮೆಂಬರೇನ್ ಆಕ್ಸಿಜನೇಷನ್ (ಇಸಿಎಂಒ) ಬೆಂಬಲದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದಿಕಿ ನಿಧನ ಹೊಂದಿದ್ದಾರೆ.

ತೆಲುಗು, ಮಲಯಾಳಂ, ಹಿಂದಿ ಚಿತ್ರೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಿದ್ದಿಕಿ, ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು.

ಕಾಬುಲಿವಾಲಾ, ಗಾಡ್ ಫಾದರ್, ರಾಮ್ ಜಿ ರಾವ್ ಸ್ಪೀಕಿಂಗ್, ಫ್ರೆಂಡ್ಸ್, ಹಿಟ್ಲರ್ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಿದ್ದಿಕಿ ಆಕ್ಷನ್ ಕಟ್ ಹೇಳಿದ್ದಾರೆ. ಕಿರುತೆರೆಯಲ್ಲೂ ಸಿದ್ಧಿಕಿ ಅವರು ಸಕ್ರಿಯರಾಗಿದ್ದರು. ಅನೇಕ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಆ ಮೂಲಕ ಟಿವಿ ಪ್ರೇಕ್ಷಕರಿಗೂ ಅವರು ಹೆಚ್ಚು ಕನೆಕ್ಟ್ ಆಗಿದ್ದಾರೆ. ಸಿದ್ಧಿಕಿ ಅವರು ಕೊನೆಯದಾಗಿ ನಿರ್ದೇಶನ ಮಾಡಿದ್ದು ಮೋಹನ್​ಲಾಲ್ ನಟನೆಯ ‘ಬಿಗ್ ಬ್ರದರ್’ ಚಿತ್ರಕ್ಕೆ. ಆ ಸಿನಿಮಾ 2020ರಲ್ಲಿ ತೆರೆಕಂಡಿತ್ತು. ಅಗಲಿದೆ ನಿರ್ದೇಶಕನಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.