ಅತ್ಯಾಚಾರ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ 2021ರಲ್ಲಿ ಪರಿಚಿತ ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಲ್ಲದೇ, ಅದನ್ನು ವೀಡಿಯೋ ಮಾಡಿ ಬೆದರಿಕೆ ಹಾಕಿದ್ದ ಎನ್ನುವ ಆರೋಪವೂ ಬಾಬು ಮೇಲಿದೆ. ಜೊತೆಗೆ ಮಹಿಳೆಗೆ ಬೆದರಿಕೆವೊಡ್ಡಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗುತ್ತಿದೆ. ಹಣ ನೀಡದಿದ್ದರೆ ವೀಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದನು.
ವೀಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದಾಗ ಆ ಮಹಿಳೆ ಒಡವೆ ಮಾರಿ ಹಣ ಕೊಟ್ಟಿದ್ದರು. ಆದರೂ, ಬಾಬು ಮತ್ತೆ ಮತ್ತೆ ಹಣ ಕೇಳುವ ಪರಿಪಾಠ ಬೆಳೆಸಿಕೊಂಡಿದ್ದ. ಕಳೆದ ಜುಲೈ 30 ರಂದು ಮತ್ತೆ ಮಹಿಳೆಯನ್ನು ಕರೆಯಿಸಿ ಬೆದರಿಕೆ ಕೂಡ ಹಾಕಿದ್ದನಂತೆ. ಮಹಿಳೆಯನ್ನ ಕಾರಿನಲ್ಲಿ ಸುತ್ತಾಡಿಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರೋದಾಗಿ ಆರೋಪ ಮಾಡಲಾಗಿದೆ. ಗನ್ ಪಾಯಿಂಟ್ ನಲ್ಲಿ ಗುರಿ ಇಟ್ಟು ಬೆದರಿಸಿದ್ದಾರೆಂದು ದೂರಲಾಗಿದೆ.
ದೂರಿನನ್ವಯ ಬಾಬು ಹಾಗೂ ಸ್ನೇಹಿತರ ಮೇಲೆ ಎಫ್ಐಆರ್ ದಾಖಲಾಗಿತ್ತು. ಆರೋಪಿಯನ್ನು ಅರೆಸ್ಟ್ ಮಾಡಿ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.










