ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ 3.6ರಷ್ಟು ತೀವ್ರತೆಯ ಭೂಕಂಪನ ದಾಖಲು…

69
firstsuddi

ರಾಜೌರಿ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಇಂದು ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಬೆಳಗಿನ ಜಾವ 3.49 ನಿಮಿಷಕ್ಕೆ ಭೂಮಿ ನಡುಗಿದ್ದು, ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ. ಈವರೆಗೂ ಯಾವುದೇ ಅನಾಹುತಗಳ ಬಗ್ಗೆ ವರದಿಯಾಗಿಲ್ಲ. ರಾತ್ರೋರಾತ್ರಿ ಭೂಮಿ ನಡುಗಿದ ಕಾರಣ ಜನರು ಆತಂಕಗೊಂಡಿದ್ದಾರೆ.