ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಾಲಕ, ಅಂತ್ಯಕ್ರಿಯೆ ವೇಳೆ ಜೀವಂತ…

145
firstsuddi

ಧಾರವಾಡ: ಸಾವನ್ನಪ್ಪಿದ್ದಾನೆ ಅಂದುಕೊಂಡಿದ್ದ ಬಾಲಕನೊಬ್ಬ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡುವಾಗ ಜೀವಂತವಾಗಿರುವ ಅಚ್ಚರಿಯ ಘಟನೆಯೊಂದು ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.

ಒಂದೂವರೆ ವರ್ಷದ ಆಕಾಶ್ ಬಸವರಾಜ ಪೂಜಾರ ಎಂಬ ಬಾಲಕ ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದ. ಈತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದರು. ಈ ಹಿನ್ನೆಲೆ ಬಾಲಕನ ಪೋಷಕರು ಬಾಲಕನನ್ನು ತಮ್ಮ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿದ್ದಾರೆ.

ಅಂತ್ಯಕ್ರಿಯೆ ಮಾಡುವ ಸಂದರ್ಭ ಬಾಯಿಗೆ ನೀರು ಹಾಕಿದ್ದೇ ತಡ ಮಗು ಜೀವಂತವಾಗಿದೆ. ಮಗು ಕೈಕಾಲು ಅಲುಗಾಡಿಸಿದ್ದಕ್ಕೆ ಪೋಷಕರು ಮತ್ತೆ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸದ್ಯ ಬಾಲಕನಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಈ ಪ್ರಕರಣ ಎಲ್ಲರ ಅಚ್ಚರಿಗೆ ಕಾರಣವಾಗಿದೆ.