ಹಂಸಲೇಖರಿಂದ ನಾಡಹಬ್ಬ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ.

73
firstsuddi

ಮೈಸೂರು: ನಾಡಹಬ್ಬ ದಸರಾವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಹರಕೆ ತೀರಿಸಲು ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್
ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಆಗಮಿಸಿದ್ದರು. ಬಳಿಕ ಚಾಮುಂಡೇಶ್ವರಿಗೆ ರೇಷ್ಮೆ ಸೀರೆ ಒಪ್ಪಿಸಲಾಯಿತು.

ಗ್ಯಾರಂಟಿ ಕಾರ್ಡ್ ವಿಚಾರವಾಗಿ ಹರಕೆ ಮಾಡಲಾಗಿತ್ತು. ಈ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿದ್ದಾರೆ.

ಬಳಿಕ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಜೊತೆಗಿನ ಸಂಬಂಧದ ಬಗ್ಗೆ ಮಾತನಾಡಿದರು. ವಿರೋಧ ಪಕ್ಷಗಳು ನಮ್ಮನ್ನ ಎಷ್ಟು ದೂರ ಮಾಡಲು ಯತ್ನ ಮಾಡಿತ್ತಿದ್ದಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ. ವಿರೋಧ ಪಕ್ಷಗಳು ನಮ್ಮಿಬ್ಬರ ಸಂಬಂಧದ ವಿಚಾರದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನ ನೀವು ನೋಡುತ್ತಲೇ ಇರುತ್ತೀರಿ ಎಂದಿದ್ದಾರೆ.

ನಾಳೆ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಸಿದ್ಧತೆ ನಡೆಯುತ್ತಿದೆ.