ನಡುರಸ್ತೆಯಲ್ಲೇ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು…

67
firstsuddi

ಬೆಳಗಾವಿ: ಯುವಕನೊಬ್ಬನನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿವಬಸವನಗರದಲ್ಲಿ ನಡೆದಿದೆ.

ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಬೈಕ್ ಮೇಲೆ ಹಿಂಬಾಲಿಸಿಕೊಂಡು ಬಂದ ಮೂವರು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೃತ್ಯ ಎಸಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಮಾಹಿತಿ ಪಡೆದ ಡಿಸಿಪಿ ಶೇಖರ್, ಎಸಿಪಿ ಕಟ್ಟಿಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶ್ವಾನ ದಳ, ಬೆರಳಚ್ಚು ತಜ್ಞರು ಮಾಹಿತಿ ಸಂಗ್ರಹಿಸಿದ್ದಾರೆ.

ಯುವಕನ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.