ಚಿಕ್ಕಮಗಳೂರು: ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶ- ಮನನೊಂದು ರೈತ ಆತ್ಮಹತ್ಯೆ…

69
firstsuddi

ಚಿಕ್ಕಮಗಳೂರು: ಮಳೆ ಇಲ್ಲದೆ ಬೆಳೆ ಸಂಪೂರ್ಣ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರಿನಲ್ಲಿ ನಡೆದಿದೆ.

ಪರಮೇಶ್ವರಪ್ಪ(52) ಆತ್ಮಹತ್ಯೆಗೆ ಶರಣಾದ ರೈತ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದರಿಂದ ರೈತ ಪರಮೇಶ್ವರಪ್ಪ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬ್ಯಾಂಕ್ ಸೇರಿದಂತೆ ಒಟ್ಟು 5 ಲಕ್ಷ ಸಾಲ ಮಾಡಿಕೊಂಡಿದ್ದ, ಈಗ ಮಳೆ ಇಲ್ಲದೇ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದೆ. ಇದರಿಂದ ಪರಮೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.