ವ್ಯಾಪಾರಿ ಸಂಸ್ಥೆಗಳು ಗ್ರಾಹಕ ಸ್ನೇಹಿಯಾಗಿ ಕೆಲಸ ಮಾಡಬೇಕು: ಎಂ.ಎಲ್.ಮೂರ್ತಿ.

102
firstsuddi

ಚಿಕ್ಕಮಗಳೂರು: ವ್ಯಾಪಾರಿ ಸಂಸ್ಥೆಗಳು ಗ್ರಾಹಕ ಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್. ಮೂರ್ತಿ ಸಲಹೆ ಮಾಡಿದರು.

ಶಿವ್ ನೀಲ್‍ಗ್ಯಾಸ್ ಸೇಲ್ಸ್ ಸಂಸ್ಥೆ ನಗರದ ಗ್ರ್ಯಾಂಡ್ ಕೃಷ್ಣ ಸಭಾಂಗಣದಲ್ಲಿ ನಿನ್ನೆ ಏರ್ಪಡಿಸಿದ್ದ ಭಾರತೀಯ ತೈಲ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಾಪಾರಿ ಸಂಸ್ಥೆಗಳಲ್ಲಿ ಸ್ಥಳೀಯ ಭಾಷೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು, ಸಿಬ್ಬಂದಿಗಳು ಗ್ರಾಹಕರೊಂದಿಗೆ ಸ್ನೇಹಿತರಂತೆ ವರ್ತಿಸಬೇಕು. ಹಾಗಾದಾಗ ಮಾತ್ರ ಆ ಸಂಸ್ಥೆಗಳು ಬೆಳೆಯುತ್ತವೆ ಎಂದು ಕಿವಿ ಮಾತು ಹೇಳಿದರು.

ಇಂಡಿಯನ್ ಆಯಿಲ್ ಸಂಸ್ಥೆ 64 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದು. ಅದರ ಮೇಲೆ ಗ್ರಾಹಕರಿಗಿರುವ ನಂಬಿಕೆ ವಿಶ್ವಾಸವನ್ನು ತೋರಿಸುತ್ತದೆ ಎಂದ ಅವರು, ಸಂಸ್ಥೆ ಗ್ರಾಹಕರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಮಾತನಾಡಿ, ಜಗತ್ತಿನಲ್ಲಿ ಜನಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಇಂಧನದ ಮಿತ ಬಳಕೆಗೆ ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಸ್ಥೆ ಬೆಳೆಯಲು ಸಹಕರಿಸಿದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು.

ಇಸ್ರೋ ಸಂಸ್ಥೆಯ ನಿವೃತ್ತ ವಿಜ್ಞಾನಿ ಎಸ್.ಜಿ. ಪ್ರಕಾಶ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿ ಚಂದ್ರಶೇಖರ್ ಅವರನ್ನು ಗೌರವಿಸಲಾಯಿತು.

ಸಂಸ್ಥೆಯ ವ್ಯವಸ್ಥಾಪಕರ ಜಿತ್ ಕಂಪನಿಯ ನೂತನ ಸುಧಾರಿತ ಉತ್ಪನ್ನಗಳನ್ನು ಪ್ರದರ್ಶಿಸುವುದರ ಜೊತೆಗೆ ಅವುಗಳ ಸುರಕ್ಷತೆ ಮತ್ತು ಲಾಭಗಳನ್ನು ವಿವರಿಸಿದರು.