ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಶರಣು…

50
firstsuddi

ಬೆಂಗಳೂರು: ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೃಷ್ಣವೇಣಿ (26) ಮೃತ ನವ ವಿವಾಹಿತೆ. ಮೃತ ಕೃಷ್ಣವೇಣಿ ಅವರನ್ನು ಮೂರು ತಿಂಗಳ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೋಲಾರ ಮೂಲದ ಪೃಥ್ವಿರಾಜ್ ಎಂಬುವವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿ ಕಾಡುಗೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನಿನ್ನೆ ಮನೆಯಲ್ಲಿ ಯಾರು ಇಲ್ಲದಿರುವಾಗ ಕೃಷ್ಣವೇಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಮಗಳ ಸಾವಿಗೆ ಅಳಿಯನೇ ಕಾರಣ ಎಂದು ಆರೋಪಿಸಿ ಮೃತಳ ಪೋಷಕರು ದೂರು ನೀಡಿದ್ದಾರೆ.

ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.