40ನೇ ಮಹಡಿಯಿಂದ ನಿರ್ಮಾಣ ಹಂತದ ಲಿಫ್ಟ್ ಕುಸಿದು 6 ಮಂದಿ ಕಾರ್ಮಿಕರ ದಾರುಣ ಸಾವು…

54
firstsuddi

ಮುಂಬೈ: 40ನೇ ಮಹಡಿಯಿಂದ ನಿರ್ಮಾಣ ಹಂತದ ಲಿಫ್ಟ್ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಮತ್ತು ಕರಿದಾಸ್ (38) ಎಂದು ಗುರುತಿಸಲಾಗಿದೆ. ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಇವರೆಲ್ಲಾ ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಪಡೆದ ನಂತರ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನೆಲಮಾಳಿಗೆಯ ಪಾರ್ಕಿಂಗ್‌ನಿಂದ ಕಾರ್ಮಿಕರನ್ನು ಹೊರತೆಗೆದರು.

ಪ್ರಾಥಮಿಕ ತನಿಖೆಯ ಪ್ರಕಾರ ಲಿಫ್ಟ್‌ನ ಕೇಬಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.