ನವದೆಹಲಿ: ಮಣಿಪುರದ ಉಖ್ರುಲ್ನಲ್ಲಿ 5.1 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಸೋಮವಾರ ರಾತ್ರಿ 11.1ಕ್ಕೆ 20ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ.
ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ 3.39ಕ್ಕೆ ಭೂಕಂಪ ಸಂಭವಿಸಿದೆ ಮತ್ತು 93 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಒಂದು ದಿನದ ಹಿಂದಷ್ಟೆ ಇಂಡೋನೇಷ್ಯಾದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ, ಈ ವರ್ಷ ಏಪ್ರಿಲ್ನಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿತ್ತು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಮೊರಾಕೋದಲ್ಲಿ ಭೂಕಂಪದಿಂದ 2,700ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 6.8 ತೀವ್ರತೆಯ ಭೂಕಂಪ ಸಂಭವಿಸಿತ್ತು.










