ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ…

51
firstsuddi

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದ್ದು, ಸೆಪ್ಟೆಂಬರ್ 15, 16 ಮತ್ತು 17 ರಂದು ವಿಶೇಷ ಬಸ್ಸುಗಳು ಸಂಚರಿಸಲಿವೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.

ಸೆಪ್ಟೆಂಬರ್ 18 ರಂದು ರಾಜ್ಯ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳು ಸಂಚರಿಸಲಿವೆ. ಕೆಎಸ್‌ಆರ್‌ಟಿಸಿ ವತಿಯಿಂದ 1200 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಮಂಗಳೂರು, ಹಾಸನ, ಹುಬ್ಬಳ್ಳಿ, ಧಾರವಾಡ, ಶೃಂಗೇರಿ, ಹೈದರಾಬಾದ್ ಸೇರಿದಂತೆ ಹಲವು ನಗರಗಳಿಗೆ ವಿಶೇಷ ಬಸ್ ಸೌಲಭ್ಯ ಇರಲಿದೆ.

ಶಾಂತಿನಗರ ಬಸ್ ನಿಲ್ದಾಣದಿಂದ ಮಧುರೈ, ಚೆನ್ನೈ, ಕುಂಭಕೋಣಂ, ಕೋಯಮತ್ತೂರು ಸೇರಿದಂತೆ ಹಲವು ಸ್ಥಳಗಳಿಗೆ ಬಸ್ ಸಿಗಲಿದೆ. ವಿಶೇಷ ಬಸ್ಸುಗಳ ಟಿಕೆಟ್ ಬುಕ್ಕಿಂಗ್​ಗಾಗಿ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಇದೆ. ಹೆಚ್ಚಿನ ಬಸ್ ಟಿಕೆಟ್ ಬುಕ್ಕಿಂಗ್​​ಗೆ ವಿಶೇಷ ಡಿಸ್ಕೌಂಟ್ ಸಿಗಲಿದೆ.

ಇ-ಟಿಕೆಟ್ ಬುಕ್ಕಿಂಗ್ ಅನ್ನು www.ksrtc.karnataka.gov.in ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ರಾಜ್ಯ ಮತ್ತು ಅಂತರಾಜ್ಯದಲ್ಲಿರುವ 691 ಗಣಕೀಕೃತ ಬುಕ್ಕಿಂಗ್ ಕೌಂಟರ್ ನಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಜನ ಮುಂಗಡ ಬುಕ್ಕಿಂಗ್ ಮಾಡಿದರೆ ಶೇ.5 ಹಾಗೂ ಹೋಗಿ ಬರುವ ಎರಡೂ ಸೈಡ್ ಟಿಕೆಟ್ ಬುಕ್ಕಿಂಗ್​ಗಾಗಿ ಶೇ.10ರಷ್ಟು ರಿಯಾಯ್ತಿ ಸಿಗಲಿದೆ ಎಂದು ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ನಿಗಮ ಪತ್ರಿಕಾ ಪ್ರಕಟಣೆ ಹೊರಡಿಸಿದೆ.