ಅನ್​ಲೋಡ್ ಮಾಡುವಾಗ ಗ್ರಾನೈಟ್ ಅಡಿ ಸಿಲುಕಿ ಇಬ್ಬರು ಕೂಲಿ ಕಾರ್ಮಿಕರ ದುರ್ಮರಣ…

54
firstsuddi

ಉಡುಪಿ: ಭಾರಿ ಗಾತ್ರದ ಗ್ರಾನೈಟ್‍ಗಳನ್ನು ಅನ್​ಲೋಡ್ ಮಾಡುವಾಗ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಮಲ್ಪೆ ಬಳಿಯ ತೊಟ್ಟಂ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಓರಿಸ್ಸಾದ ಕಾರ್ಮಿಕರಾದ ಬಾಬುಲ್ಲ (35) ಮತ್ತು ಭಾಸ್ಕರ (35) ಎಂದು ಗುರುತಿಸಲಾಗಿದೆ

ಮಾಹಿತಿಗಳ ಪ್ರಕಾರ ತೊಟ್ಟಂ ನಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದಕ್ಕೆ ಕಂಟೈನರ್ ಲಾರಿಯಲ್ಲಿ ತಂದಿದ್ದ ಗ್ರಾನೈಟ್ ಇಳಿಸುತ್ತಿರುವಾಗ ಲಾರಿಯೊಳಗೆ ಗ್ರಾನೈಟ್ ಜಾರಿ ಮೈಮೇಲೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.