ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು…

71
firstsuddi

ತುಮಕೂರು: ಎರಡು ಬಸ್​ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು. ಉಚಿತ ಬಸ್ ಪ್ರಯಾಣ ಹಿನ್ನೆಲೆ ಕೆಎಸ್​ಆರ್​ಟಿಸಿ ಬಸ್ ಮೂಲಕ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗಲು ಏಳು ಮಹಿಳೆಯರುಳ್ಳ ತಂಡ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ತಂಡದಲ್ಲಿದ್ದ ಇಬ್ಬರು ಮಹಿಳೆಯರು ಬಸ್ ಹತ್ತಲು ಮುಂದಾದಾಗ ಗೌರಿಬಿದನೂರು ಹಾಗೂ ಕೊರಟಗೆರೆಯ ಬಸ್‍ಗಳ ನಡುವೆ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್​ಆರ್​ಟಿಸಿ ಬಸ್ ಚಾಲಕ ಗೋವಿಂದರಾಜು ಅವರು ಬಸ್ ಅನ್ನು ರಿವರ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸದ್ಯ, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.