ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತದಿಂದ ಸಾವು…

100
firstsuddi

ದಕ್ಷಿಣ ಕನ್ನಡ: ಕರ್ತವ್ಯದಲ್ಲಿ ಇದ್ದಾಗಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತ ಸಿಬ್ಬಂದಿ. ಇಂದು ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಎ.ಎಸ್.ಐ ರಾಜೇಶ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

1993ನೇ ಬ್ಯಾಚ್​ನ ಪೊಲೀಸ್ ಸಿಬ್ಬಂದಿಯಾಗಿದ್ದ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯೂ ಆಗಿ ಕಾರ್ಯನಿರ್ವಹಿಸುತ್ತಿದ್ದರು.