ಖಾಸಗಿ ವೀಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಗಂಡನನ್ನು ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ…

62
firstsuddi

ಚಾಮರಾಜನಗರ: ವ್ಯಕ್ತಿಯೊಬ್ಬ ಶಾಲಾ ಶಿಕ್ಷಕಿಯ ಖಾಸಗಿ ವೀಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ದರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.

ಅಬ್ದುಲ್ ಅಸೀಮ್ ಹಾಗೂ ಮಯೂರ್ ಎನ್ನುವವರು ಶಿಕ್ಷಕಿ ಬಳಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಲ್ಲದೇ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ ಪತಿಯನ್ನು ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದ ಸಂತ್ರಸ್ಥೆ ಶಿಕ್ಷಕಿ ಚಾಮರಾಜನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಅಬ್ದುಲ್ ಅಸೀಮ್ ಹಾಗೂ ಮಯೂರ್ ಎಂಬುವವರು ಶಿಕ್ಷಕಿಯ ಅಶ್ಲೀಲ ವೀಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ ಕುಟುಂಬಸ್ಥರಿಗೆ ಕಳುಹಿಸಿದ್ದಾರೆ. ಅಬ್ಧುಲ್ ಅಸೀಮ್ ಎನ್ನುವಾತ ನೊಂದ ಸಂತ್ರಸ್ಥೆ (ಶಿಕ್ಷಕಿ) ಜೊತೆ ಕಳೆದ 7 ವರ್ಷಗಳಿಂದ ಸ್ನೇಹಿತನಾಗಿದ್ದ. ಆದರೆ, ಶಿಕ್ಷಕಿ ಕಳೆದ 2 ವರ್ಷದ ಹಿಂದೆ ಬೇರೊಬ್ಬನೊಂದಿಗೆ ವಿವಾಹವಾಗಿದ್ದರು. ವಿವಾಹದ ಬಳಿಕ ಪತಿಯನ್ನ ಬಿಟ್ಟು ನನ್ನ ಜೊತೆ ಬಾ ಎಂದು ಧಮ್ಕಿ ಹಾಕುತ್ತಿದ್ದ. ಪತಿಯನ್ನ ಬಿಟ್ಟು ಬರದೆ ಇದ್ದರೆ ನಮ್ಮಿಬ್ಬರ ಖಾಸಗಿ ವೀಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇನ್ನು ವೀಡಿಯೋ ಸಾಮಾಜಿ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಬಾರದು ಅಂದ್ರೆ 10 ಲಕ್ಷ ರೂ. ಹಣ ನೀಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾನೆ. ಹಣ ನೀಡದಿದ್ದಲ್ಲಿ ಆಕೆಯ ಖಾಸಗಿ ವೀಡಿಯೋದ ದೃಶ್ಯಗಳ ಬ್ಯಾನರ್‌ಗಳನ್ನು ಆ ಪ್ರದೇಶದಲ್ಲಿ ಹಾಕುವುದಾಗಿ ಆರೋಪಿ ಬೆದರಿಕೆಯೊಡ್ಡಿದ್ದ.

ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.