ರಾಜ್ಯದ 3ನೇ ವಂದೇ ಭಾರತ್ ರೈಲಿಗೆ ಸೆ.24ರಂದು ಅಧಿಕೃತ ಚಾಲನೆ- ಇಂದು ಪ್ರಾಯೋಗಿಕ ಸಂಚಾರ…

61
firstsuddi

ನವದೆಹಲಿ: ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು ಈ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.

ಹೈದರಾಬಾದ್‌ನ ಕಾಚಿಗುಡ– ಯಶವಂತಪುರ ನಿಲ್ದಾಣದ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದ 2 ಐಟಿ ನಗರಗಳ ನಡುವಿನ ಮೊದಲ ವಂದೇ ಭಾರತ್ ರೈಲಾಗಲಿದೆ.

ಇಂದು ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45ಕ್ಕೆ ಯಶವಂತಪುರದಿಂದ ಕಾಚಿಗುಡ ತೆರಳಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 24ರಿಂದ ಓಡಾಟ ಶುರು ಮಾಡಲಿರುವ ಈ ರೈಲು, ಯಶವಂತಪುರ, ಧರ್ಮಾವರಂ, ಧೋನೆ, ಕರ್ನೂಲ್ ಸಿಟಿ, ಗದ್ವಾಲ್ ಜಂಕ್ಷನ್, ಮಹೆಬೂಬ್‌ನಗರ, ಶಾದ್‌ನಗರ ಮತ್ತು ಕಾಚಿಗುಡ ಮೂಲಕ ರೈಲು ಸಂಚರಿಸಲಿದೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ವೇಳಾಪಟ್ಟಿ ಬರಬೇಕಿದೆ.