ಶಾಲಾ ಆವರಣದಲ್ಲಿ ವಾಮಾಚಾರ- ಬೆಚ್ಚಿಬಿದ್ದ ಸಿಬ್ಬಂದಿ, ವಿದ್ಯಾರ್ಥಿಗಳು…

68
firstsuddi

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ ಕೊಠಡಿಯ ಮುಂಭಾಗದಲ್ಲಿ ಕಿಡಿಗೇಡಿಗಳು ವಾಮಾಚಾರ ನಡೆಸಿದ್ದಾರೆ.

ಇಂದು ಬೆಳಗ್ಗೆ ತರಗತಿಗೆ ಧಾವಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ, ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಕಂಡು ಬೆಚ್ಚಿಬಿದ್ದಿದ್ದಾರೆ.

ಕೃತ್ಯ ನಡೆದ ಸ್ಥಳಕ್ಕೆ ತಳಕು ಠಾಣೆಯ ಪಿಎಸ್ಐ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಬೆದರಿಸಲು ವಾಮಾಚಾರ ನಡೆಸಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ. ಸದ್ಯ ವಾಮಾಚಾರಕ್ಕೆ ಬಳಸಿದ ಬುರುಡೆ ಇತರೆ ವಸ್ತುಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.