ಮಾಜಿ ಸಿಎಂ ವೀರೇಂದ್ರ ಪಾಟೀಲ್ ಪತ್ನಿ ನಿಧನ…

60
firstsuddi

ಬೆಂಗಳೂರು/ಕಲಬುರಗಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್(93) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ವೀರೇಂದ್ರ ಪಾಟೀಲ್ ಅವರ ಪತ್ನಿ ಶಾರದಾ ಪಾಟೀಲ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ್ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.

ಇನ್ನು ಶಾರದಾ ಪಾಟೀಲ್ ಅವರ ಪಾರ್ಥಿವ ಶರೀರವನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ತಗೆದುಕೊಂಡು ಹೋಗಲಾಗುತ್ತದೆ. ಬಳಿಕ ನಾಳೆ ವೀರೇಂದ್ರ ಪಾಟೀಲ್ ಅವರ ಸಮಾಧಿ ಪಕ್ಕದಲ್ಲಿಯೇ ಶಾರದಾ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರ ಕೈಲಾಸನಾಥ್ ಪಾಟೀಲ್ ಮಾಹಿತಿ ನೀಡಿದ್ದಾರೆ.