ಮಂಗಳೂರು: ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆಗೆ ಶರಣು…

63
firstsuddi

ಮಂಗಳೂರು: ಇಲ್ಲಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೆಟ್ಟಿ(43) ಎಂದು ಗುರುತಿಸಲಾಗಿದೆ. 60 ಬಸ್‌ಗಳನ್ನು ಹೊಂದಿರುವ ಪ್ರಕಾಶ್ ಶೆಟ್ಟಿ ಮಂಗಳೂರಿನ ಕದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೂ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.