ಹಳಿ ತಪ್ಪಿದ ರೀ ರೈಲ್- ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ…

47
firstsuddi

ಬೆಂಗಳೂರು: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ಹಳಿ ತಪ್ಪಿದ ಹಿನ್ನೆಲೆ ಈ ತೊಂದರೆಯಾಗಿದೆ.

ರಾಜಾಜಿನಗರ ನಿಲ್ದಾಣದ ಕರ್ವ್ ನಲ್ಲಿ ಈ ಘಟನೆ ನಡೆದಿದ್ದು, ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ರೈಲ್ವೆ ಟ್ರ್ಯಾಕ್ ನಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಏಕಮುಖವಾಗಿ ಮಾತ್ರ ರೈಲುಗಳು ಸಂಚರಿಸುತ್ತಿದೆ. ಪರಿಣಾಮ ಪ್ರಯಾಣಿಕರಿಗೆ ಭಾರೀ ಅನಾನುಕೂಲವಾಗಿದೆ.

ರೀ ರೈಲ್ ವಾಹನವನ್ನು ಹಳಿಗೆ ತರಲು ಮೆಟ್ರೋ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ರೀ ರೈಲ್ ತೆರವು ಆಗುವವರೆಗೆ ಏಕಮುಖ ಸಂಚಾರ ಇರಲಿದ್ದು, ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.