ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಏರ್ ಬೇಸ್‌ಗೆ ಆಗಮಿಸಿದ ಮೋದಿ.

53
firstsuddi

ಬೀದರ್: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಏರ್ ಬೇಸ್‌ಗೆ ಆಗಮಿಸಿದರು.

ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ಪ್ರಭು ಚವ್ಹಾಣ್ ಜೊತೆ ಇಬ್ಬರು ಬಿಜೆಪಿ ಶಾಸಕರು ಮೋದಿ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು.

ಬೀದರ್ ಏರ್‌ಬೇಸ್‌ನಿಂದ ಹೆಲಿಕಾಪ್ಟರ್ ಮೂಲಕ ತೆಲಂಗಾಣದ ನಿಜಾಮಾಬಾದ್‌ಗೆ ಮೋದಿ ತೆರಳಿ ನಂತರ ಬಿಜೆಪಿಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಸಂಜೆ ಬೀದರ್ ಏರ್‌ಬೇಸ್‌ಗೆ ಆಗಮಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಮೋದಿ ಆಗಮನ ಹಿನ್ನೆಲೆ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದು, 4 ಎಸ್‌ಪಿಗಳು, 7 ಜನ ಡಿಎಸ್‌ಪಿ, 9 ಜನ ಸಿಪಿಐ, 21 ಜನ ಪಿಎಸ್‌ಐ ಹಾಗೂ 500ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.