ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮದ ವೃದ್ಧ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತದಿಂದ ಪತಿ ಹನುಮಂತಪ್ಪ ಮೇಟಿ(81) ಕುಷ್ಟಗಿಯಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದರು. ಇತ್ತ ಪತಿಯ ಸಾವಿನಿಂದ ಆಘಾತಗೊಂಡಿದ್ದ ಪತ್ನಿ ಗೌರಮ್ಮ ಮೇಟಿ(65), ಇಂದು ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೆಲವೇ ತಾಸುಗಳಲ್ಲಿ ದಂಪತಿ ಸಾವಿನಿಂದ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಸ್ಥಳೀಯರು, ಸಂಬಂಧಿಕರು ದಂಪತಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.










