ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವಂತಹ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯ ಕೋಣೆಯ ಒಳಗೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿ ಹಚ್ಚಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅದೇ ಕುಟುಂಬದ ಕಿರಿಯ ಮಗ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರ್ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










