ಚಿಕ್ಕಮಗಳೂರು: ಸಾಲಭಾದೆಯಿಂದ ಬೇಸತ್ತು ರೈತ ಆತ್ಮಹತ್ಯೆ…

55
firstsuddi

ಚಿಕ್ಕಮಗಳೂರು: ಸಾಲಭಾದೆಯಿಂದ ಬೇಸತ್ತು ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಿಂಗದಹಳ್ಳಿ ಗ್ರಾಮದ ರೈತ ಕೃಷ್ಣನಾಯ್ಕ್ (55) ಸಾಲಭಾದೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣನಾಯ್ಕ್ ಅವರು 3 ಲಕ್ಷ ರೂ. ಸಾಲ ಮಾಡಿ ರಾಗಿ, ಜೋಳ ಬಿತ್ತನೆ ಮಾಡಿದ್ದರು. ಮಳೆ ಇಲ್ಲದೆ ಬೆಳೆ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ರೈತ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಡೂರು ತಾಲೂಕಿನಲ್ಲಿಯೇ ಕಳೆದ 40 ದಿನಗಳಲ್ಲಿ ರೈತರ ಐದನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಘಟನೆ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.