ಸೂಳೆಕೆರೆಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ…

62
firstsuddi

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಸೂಳೆಕೆರೆಗೆ ಹಾರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡದಿದೆ.

ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ್ ಪತ್ನಿ. ಕಳೆದ ಶುಕ್ರವಾರ ಮಗಳು ನಿಹಾರಿಕಾಳೊಂದಿಗೆ ಕವಿತಾ ಕಾಣೆಯಾಗಿದ್ದಳು. ಈ ಬಗ್ಗೆ ಪತಿ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದರು. ಇಂದು ಸೂಳೆಕೆರೆಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ.

ಮೂಲತಃ ಎರೇಹಳ್ಳಿಯ ನಿವಾಸಿಯಾದ ಕವಿತಾ ಅವರು ಆರು ವರ್ಷದ ಹಿಂದೆ ಹೊನ್ನೆಬಾಗಿ ಮಂಜುನಾಥ್‍ನೊಂದಿಗೆ ಮದುವೆ ಆಗಿದ್ದರು. ಕಳೆದ ಕೆಲ ವರ್ಷಗಳಿಂದ ಪತಿ ಹಾಗೂ ಅವರ ಮನೆಯವರು ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಪತಿ ಹಾಗೂ ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಕವಿತಾ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.