ರಾಯಚೂರು: ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ…

57
firstsuddi

ರಾಯಚೂರು: ನಗರದ ಹೊರವಲಯದ ಯರಮರಸ್ ಬೈಪಾಸ್ ರಸ್ತೆಯ ಬ್ರಿಡ್ಜ್ ಬಳಿ ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಶವ ಕೊಳೆತ ಸ್ಥಿತಿಯಲ್ಲಿ ದೊರಕಿದೆ. ಮಹಿಳೆ ಗುರುತು ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಕೈಗೊಳುವುದಾಗಿ ರಾಯಚೂರು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.