ಹಳಿತಪ್ಪಿದ ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು…

45
firstsuddi

ಕೊಪ್ಪಳ: ಕಾರಟಗಿ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ಜಿಲ್ಲೆಯ ಕಾರಟಗಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.

ಬೆಂಗಳೂರಿನ ಯಶವಂತಪುರದಿಂದ ಹೊರಟ ರೈಲು ಇಂದು ಬೆಳಗ್ಗೆ ಕಾರಟಗಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಇಂಜಿನ್ ಭಾಗ ಸಂಪೂರ್ಣವಾಗಿ ಹಳಿ ತಪ್ಪಿದೆ. ರೈಲ್ವೆ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಅದೃಷ್ಟವಶಾತ್ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.

ರೈಲು ಹಳಿ ತಪ್ಪಿದ್ದರಿಂದ ಇನ್ನುಳಿದ ಎರಡು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.