ಕೌಟುಂಬಿಕ ಕಲಹ– ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಪತಿ…

61
firstsuddi

ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

ನಂದಿನಿ(30) ಕೊಲೆಯಾದ ಮಹಿಳೆ. ಮಹಿಳೆಯ ಪತಿ ಲೋಕೇಶ್ ನಾಯ್ಕ (34) ಕೊಲೆ ಆರೋಪಿಯಾಗಿದ್ದಾನೆ.
ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೆಶ್ ನಾಯ್ಕ, ತನ್ನ ಪತ್ನಿ ನಂದಿನಿ, ಓರ್ವ ಪುತ್ರ ಹಾಗೂ ಮಗಳೊಂದಿಗೆ ಕಳೆದ 3 ದಿನಗಳಿಂದ ಸಬ್ಬತ್ತಿ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಬಳಿಕ ಕೋಪಗೊಂಡ ಲೋಕೇಶ ನಾಯ್ಕ ಮಾರಕಾಸ್ತ್ರದಿಂದ ಪತ್ನಿಯ ಕತ್ತಿನ ಬಳಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಹೊರಗೆ ಓಡಿ ಬಂದಿದ್ದು, ಜನ ಸೇರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ.

ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.