ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿ ನಡೆದಿದೆ.
ರವಿ ಮುರಗೋಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ. ಶ್ರೀನಿಧಿ ಸ್ಟೀಲ್ ವರ್ಕ್ನ ಮಾಲೀಕರಾಗಿದ್ದ ಇವರು ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆದಿದ್ದರು. ಇದೀಗ ಸಾಲ ಬಾಧೆಯಿಂದ ಬೇಸತ್ತು ಕೈಗಾರಿಕಾ ಪ್ರದೇಶದಲ್ಲಿನ ವರ್ಕ್ಶಾಪ್ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










