ನಾಳೆ ವಸಿಷ್ಠ ಸಿಂಹ ಹುಟ್ಟುಹಬ್ಬ: ನಟನ ಹೊಸ ಸಿನಿಮಾ ಘೋಷಣೆ…

71
firstsuddi

ಅಭಿನಯ ಹಾಗೂ ಕಂಠದ ಮೂಲಕ ಕನ್ನಡಿಗರ ಮನ ಗೆದ್ದಿರುವ ವಸಿಷ್ಠ ಸಿಂಹ ನಾಳೆ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟುಹಬ್ಬದ ಸಲುವಾಗಿ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಚಿತ್ರದ ಘೋಷಣೆಯಾಗಿದೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು.

ಈ ಹಿಂದೆ ಸಿದ್ದಿ ಸೀರೆ ಹಾಗೂ ರಾಗಿಣಿ ಅಭಿನಯದ ಸಾರಿ ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ ಈ ನೂತನ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಕ್ರೈಮ್ ಥ್ರಿಲ್ಲರ್ ಹಾಗೂ ರಿವೆಂಜ್ ಕಥಾಹಂದರ ಹೊಂದಿರುವ ಈ ಚಿತ್ರ ಹಾಲಿವುಡ್ ಸ್ಟೈಲ್ ನಲ್ಲಿ (ನಾನ್ ಲೀನಿಯರ್ ಸ್ಕ್ರೀನ್ ಪ್ಲೇ) ಮೇಕಿಂಗ್ ಇರಲಿದೆ. ದೀಪಾವಳಿ ಹಬ್ಬದ ನಂತರ ಚಿತ್ರೀಕರಣ ಆರಂಭವಾಗಲಿದೆ.

ರಾಜೀವ್ ಗಣೇಶನ್ ಛಾಯಾಗ್ರಹಣ ಹಾಗೂ ರಾಘವನ್ ಕಾರ್ತಿಕ್ ಸಂಗೀತ ನಿರ್ದೇಶನ ಪ್ರೊಡಕ್ಷನ್ ನಂ 1 ಚಿತ್ರಕ್ಕಿರಲಿದೆ. ಅನೇಕ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ವಸಿಷ್ಠ ಅವರು, ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದಿದ್ದಾರೆ. ಶೂಟಿಂಗ್ ನಲ್ಲಿ ಇರುವ ಕಾರಣದಿಂದಾಗಿ ಮನೆಯಲ್ಲಿ ಇರುವುದಿಲ್ಲ. ಹಾಗಾಗಿ ನೀವು ಇರುವ ಜಾಗದಿಂದಲೇ ಶುಭ ಹಾರೈಸುವಂತೆ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.