ಚಾಮರಾಜನಗರ: ಉಯ್ಯಾಲೆ ಆಡುವಾಗ ಶಿಕ್ಷಕಿಯೊಬ್ಬರು ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ನಡೆದಿದೆ.
ಕೆ.ಪುಟ್ಟಿ ಮೃತ ಶಿಕ್ಷಕಿ. ಇವರು ಯಳಂದೂರು ತಾಲೂಕಿನ ಮಾಂಬಳ್ಳಿ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿ ಸಂಘದ ತಾಲೂಕು ಅಧ್ಯಕ್ಷರು ಆಗಿದ್ದರು.
ಮಂಗಳವಾರ ಸಂಜೆ ಮನೆಯಲ್ಲಿ ಉಯ್ಯಾಲೆ ಆಡುವಾಗ ಆಕಸ್ಮಿಕವಾಗಿ ಶಿಕ್ಷಕಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಮನೆಯವರು ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಕೊಳ್ಳೇಗಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










