ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಕೊರಿಯರ್ ಲಾರಿ ಡಿಕ್ಕಿ- ಪಾರಾದ ಚಾಲಕ…

61
firstsuddi

ಕೊಟ್ಟಿಗೆಹಾರ: ರಸ್ತೆ ಬದಿ ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಕೊರಿಯರ್ ವಸ್ತುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಣಕಲ್ ಗ್ರಾಮದ ಬಳಿ ನಡೆದಿದೆ.

ನಿಂತಿದ್ದ ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಕಾರಣ ಸ್ಥಳೀಯರು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಲಾರಿ ಚಾಲಕನ ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ನಿಂತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿ ಮಲಗಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ವಾಹನ ಪಲ್ಟಿಯಾಗಿದ್ದು, ಗೂಡ್ಸ್ ವಾಹನ ಸಂಪೂರ್ಣ ಜಖಂಗೊಂಡಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್ ನಿಂದ ಕೊಟ್ಟಿಗೆಹಾರದವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ವೇಗವಾಗಿ ಹೋಗುತ್ತಾರೆ. ಮೇಲಿಂದ ಮೇಲೆ ಸಾಕಷ್ಟು ಅಪಘಾತಗಳು ಸಂಭವಿಸುತ್ತವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ತಿರುವುಗಳಲ್ಲಿ ರಸ್ತೆಗೆ ಹಂಪ್ ಹಾಕಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.