ವೈಯಕ್ತಿಕ ವೈಷಮ್ಯ- ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ…

52
firstsuddi

ಶಿವಮೊಗ್ಗ: ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ.

ಸೈಯದ್ ರಜಿಖ್(30) ಮೃತ ದುರ್ದೈವಿ. ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ ಮಾಡಿ, ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.