ಸಾಮಾಜಿಕ ಬಹಿಷ್ಕಾರ ಹಾಕಿದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ…

55
firstsuddi

ಚಾಮರಾಜನಗರ: ಸಾಮಾಜಿಕ ಬಹಿಷ್ಕಾರ ಹಾಕಿದ್ದಕ್ಕೆ ವ್ಯಕ್ತಿಯೋರ್ವ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿಯಲ್ಲಿ ನಡೆದಿದೆ.

ಶಿವರಾಜು(45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇನ್ನು ಇದಕ್ಕೆ ಕಾರಣರಾದವರನ್ನು ಬಂಧಿಸುವಂತೆ ಬೇಗೂರು ಪೊಲೀಸ್ ಠಾಣೆ ಮುಂದೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಡಿವೈಎಸ್‍ಪಿ ಲಕ್ಷ್ಮಯ್ಯ ಅವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.

ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ ವಿರುದ್ಧ ಬೇಗೂರು ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.