ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ ಮಂಗಳೂರು ಸಿಸಿಬಿ…

54
firstsuddi

ಮಂಗಳೂರು: ದೇರಳಕಟ್ಟೆ ಪರಿಸರದಲ್ಲಿ ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ತೌಡುಗೋಳಿ ಕ್ರಾಸ್ ನಿವಾಸಿ ಅಬ್ದುಲ್ ಅಜೀಜ್ (42) ಬಂಧಿತ ಆರೋಪಿ. ಈತನಿಂದ 26 ಗ್ರಾಂ ತೂಕದ 1 ಲಕ್ಷ 30 ಸಾವಿರ ಮೌಲ್ಯದ ಎಂಡಿಎಂಎ, ಮಾದಕವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಸೇರಿ ಒಟ್ಟು 6 ಲಕ್ಷ 41 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಲಾಗಿದೆ.

ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಈಗಾಗಲೇ ಒಟ್ಟು 7 ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿವೆ.