ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರು ಆರೋಪಿಗಳ ಬಂಧನ…

51
firstsuddi

ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ, ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಜಿಲ್ಲೆಯ ಮಾರನಾಯಕನಪಾಳ್ಯದಲ್ಲಿ ನಡೆದಿದೆ.

ಓರಿಸ್ಸಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು. ಮಾರನಾಯಕನಪಾಳ್ಯದ ಇಟ್ಟಿಗೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳು, ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿದ್ದಾರೆ.

ಈ ವೇಳೆ 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ಎಫ್ಎಸ್ಎಲ್ ಗೆ ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.