ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ…

46
firstsuddi

ತುಮಕೂರು: ಗೃಹಸಚಿವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.

ಬನಸಿರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಬಿಇ ಐಎಸ್ ವಿಭಾಗದಲ್ಲಿ 3ನೇ ಸೆಮಿಸ್ಟರ್ ಓದುತ್ತಿದ್ದಳು. ನಿನ್ನೆ ರಾತ್ರಿ ಊಟದ ನಂತರ ತನ್ನ ಕೋಣೆಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

ನಸಿರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅವರು ಏಳು ಬ್ಯಾಕ್‌ಲಾಗ್ ಪೇಪರ್‌ಗಳನ್ನು ಉಳಿಸಿಕೊಂಡಿದ್ದರು ಮತ್ತು ಅದರಲ್ಲಿ ಒಂದನ್ನು ಮಾತ್ರ ಪಾಸ್ ಮಾಡಿದ್ದರು. ಇದರಿಂದ ತೀವ್ರ ಒತ್ತಡಕ್ಕೆ ಸಿಲುಕಿದ್ದರು ಎನ್ನಲಾಗುತ್ತಿದೆ.