ಮೈಸೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಪರಿಣಾಮ ಆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ನಡೆದಿದೆ.
ಹಾಡಿ ನಿವಾಸಿ ವಸಂತ್(36) ಮೃತ ದುರ್ದೈವಿ. ವಸಂತ್ ಅವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಂಭೀರ ಗಾಯಗೊಂಡ ವಸಂತ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










