ಚಿಕ್ಕಮಗಳೂರು: ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಳಸದ ಅರಣ್ಯಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಉಪವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಕೊಪ್ಪ ಡಿಎಫ್ಒ ನಂದೀಶ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಅಮಾನತು ಮಾಡಲಾಗಿದೆ.
ಅರಣ್ಯ ಇಲಾಖೆಯ ಕಳಸ ಉಪವಲಯ ಅರಣ್ಯಾಧಿಕಾರಿ ದರ್ಶನ್, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅರೆನೂರು ಗ್ರಾಮದ ಸುಪ್ರೀತ್ ಮತ್ತು ಅಬ್ದುಲ್ ಅವರು ಚಿಕ್ಕಮಗಳೂರು ಜಿಲ್ಲೆ ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು.










