ಚಿಕ್ಕಮಗಳೂರು: ಭಾರತೀಯ ಜೀವ ವಿಮಾ ನಿಗಮದ ವಿಮಾ ಪ್ರತಿನಿಧಿಗಳ ಸಂಘದ ಅಧ್ಯಕ್ಷರಾಗಿ ವಿರೂಪಾಕ್ಷ, ಉಪಾಧ್ಯಕ್ಷರಾಗಿ ಉಮಾ ಮಹೇಶ್ವರಪ್ಪ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯದರ್ಶಿಯಾಗಿ ಗಿರೀಶ್, ಸಹಕಾರ್ಯದರ್ಶಿಯಾಗಿ ಹೆಚ್.ಬಿ.ವಿನುತ, ಖಜಾಂಚಿಯಾಗಿ ವಿ.ಎಂ.ಸಾರಂಗರಾಜು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ 21 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ವಿರೂಪಾಕ್ಷ ಅವರ ಅಧ್ಯಕ್ಷತೆಯಲ್ಲಿ ನಗರದ ವಿಮಾ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.










