ಕಾಫಿನಾಡಲ್ಲಿ ಒಂದೇ ವರ್ಷಕ್ಕೆ 21 ಸರ್ಕಾರಿ ಶಾಲೆಗಳಿಗೆ ಬೀಗ- ಸರ್ಕಾರದ ವಿರುದ್ಧ ಜನರ ಆಕ್ರೋಶ…

54
firstsuddi

ಚಿಕ್ಕಮಗಳೂರು: ಪೋಷಕರ ಇಂಗ್ಲೀಷ್ ವ್ಯಾಮೋಹವೋ, ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನಿಡೋದಕ್ಕೆ ಸಾಧ್ಯವಾಗ್ತಿಲ್ವೋ ಅಥವಾ ಸರ್ಕಾರ ಕೇಳ್ದೋರ್ಗೆಲ್ಲಾ ಖಾಸಗಿ ಶಾಲೆಗಳಿಗೆ ಅನುಮತಿ ನಿಡ್ತಿರೋದ್ರಿಂದ್ಲೋ ಗೊತ್ತಿಲ್ಲ. ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಾನೆ ಇದೆ. ಮಕ್ಕಳಿಗೆ ಬಿಸಿಯೂಟ, ಹಾಲು, ಮೊಟ್ಟೆ, ಸೈಕಲ್ ಅಂತೆಲ್ಲಾ ವಿವಿಧ ಯೋಜನೆಗಳನ್ನ ಜಾರಿಗೆ ತಂದ್ರೂ ಕನ್ನಡ ಶಾಲೆಗಳನ್ನ ಉಳಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಕಾಫಿನಾಡಲ್ಲಿ 2023ರ ಒಂದೇ ವರ್ಷ 21 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ.

ಸರ್ಕಾರ ಮಧ್ಯಾಹ್ನ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನ ಜಾರಿಗೆ ತಂದ್ರು ಹೆತ್ತವರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರ್ಸೋಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಿರೋ ಪ್ರಮಾಣ ಕೂಡ ಹೆಚ್ಚಿದೆ. ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡ್ತಿರೋದ್ರಿಂದಲೇ ಸರ್ಕಾರಿ ಶಾಲೆಗಳಿಗೆ ಈ ಸ್ಥಿತಿ ಬಂದಿದೆ ಎಂದು ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಬೇಕು. ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು. ಆದ್ರೆ, ಸರ್ಕಾರಿ ಶಾಲೆ ಮಾತ್ರ ಬೇಡ. ಖಾಸಗಿ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಮಕ್ಕಳು ಓದುತ್ತಿದ್ದಾರೆ ಅಂದ್ರೆ ಹೆತ್ತವರಿಗೆ ಡಿಗ್ನಿಟಿ. ಪೋಷಕರು ತಮ್ಮ ಡಿಗ್ನಿಟಿಗಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿಸ್ತಿದ್ದಾರೆ ಎಂದು ಪೋಷಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕ್ತಿದ್ದಾರೆ.

ಒಟ್ಟಾರೆ ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಗಳ ನಡುವೆ ಕಣ್ಣಾಮುಚ್ಚಾಲೆ ಆಟವಾಡುತ್ತಿರೋ ಸರ್ಕಾರಗಳ ನಡೆಯಿಂದಲೇ ಸರ್ಕಾರಿ ಶಾಲೆಗಳು ಬೀಗ ಕಾಣ್ತಿವೆಯಾ ಅನ್ನೋ ಅನುಮಾನ ಮೂಡುತ್ತಿದೆ.