ಬೆಂಗಳೂರು: ನಗರದಲ್ಲಿ ಯುವಕರ ಗುಂಪೊಂದು ಕನ್ನಡ ಹಾಡು ಹಾಕಿದ್ದಕ್ಕೆ ಪಬ್‌ವೊಂದರ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರ್‌ಆರ್ ನಗರದ ಐಡಿಯಲ್ ಹೋಮ್ ಬಳಿಯ ಪಬ್‌ನಲ್ಲಿ ಅಕ್ಟೋಬರ್ 25ರಂದು ಘಟನೆ ನಡೆದಿದ್ದು, ಪಬ್‌ನಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶ್ರೇಯಸ್ ಹಾಗೂ ಆತನ ಸ್ನೇಹಿತರು ರಾತ್ರಿ 10:45ರ ಸುಮಾರಿಗೆ ಪಬ್‌ಗೆ ಬಂದಿದ್ದರು. ಪಬ್‌ನಲ್ಲಿ ಕನ್ನಡ ಹಾಡು ಹಾಕಲಾಗಿತ್ತು. ಈ ವೇಳೆ ಕನ್ನಡ ಹಾಡು ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪಬ್ ಮಾಲೀಕ ರವಿಕಾಂತ್ ಅವರು ಆರೋಪಿಸಿದ್ದಾರೆ.
ರವಿಕಾಂತ್ ನೀಡಿದ ದೂರಿನನ್ವಯ ಶ್ರೇಯಸ್ ಹಾಗೂ ಆತನ ಸ್ನೇಹಿತನ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.










