ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನೇಪಾಳ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಈ ವೇಳೆ ದುದುನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಲಾರಿ ಬೈಕಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮೃತರು ಅಫಜಲಪುರದಲ್ಲಿ ಫಾಸ್ಟ್ ಫುಡ್ ಹೋಟೆಲ್ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










