ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ…

69
firstsuddi

ಹಾಸನ: ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಜಿಲ್ಲೆಯ ಹೊರವಲಯದ ಕಾಲೇಜುವೊಂದರಲ್ಲಿ ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಓದುತ್ತಿದ್ದಳು. ಈಕೆ ನಿನ್ನೆ ಮೊದಲ ಪರೀಕ್ಷೆ ಬರೆದಿದ್ದು, ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ್ದಾಗಿ ಆರೋಪಿಸಿ ಕಾಲೇಜು ಪ್ರಾಂಶುಪಾಲರಿಗೆ ಕ್ಷಮಾಪಣೆ ಪತ್ರ ಬರೆದುಕೊಡುವಂತೆ ಉಪನ್ಯಾಸಕರೊಬ್ಬರು ಹೇಳಿದ್ದರು. ಇದರಿಂದ ಮನನೊಂದ ಮಾನ್ಯ, ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.