ಚಿತ್ರದುರ್ಗ: ಗಣಪತಿ ಪೂಜೆ ನಮ್ಮ ಸಂಸ್ಕೃತಿ ಅಲ್ಲ ಎಂದು ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಹೇಳಿದ್ದಾರೆ.
ನಿನ್ನೆ ಆರಂಭವಾದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಆರ್ಶೀವಚನ ನೀಡಿದರು. ಈ ವೇಳೆ ಮಾತನಾಡಿದ ಅವರು, ಗಣಪತಿ ಸ್ತುತಿಸುವುದು ಮೌಢ್ಯದ ಆಚರಣೆ, ವಚನ ಪ್ರಸ್ತುತ ಪಡಿಸುವುದು ನಿಜವಾದ ಪ್ರಾರ್ಥನೆ. ಶಿವಕುಮಾರ ಸ್ವಾಮೀಜಿ ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನು ಹಾಡಬಹುದು ಎಂದು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಗಣಪತಿ ಕಾಲ್ಪನಿಕ ದೇವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ನೆಪ ಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ, ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಶ್ಲೋಕ ಪಠಿಸಬೇಕು ಎಂಬುದು ಹಲವರ ನಂಬಿಕೆಯಾಗಿದ್ದು, ಅದರ ಬದಲು ವಚನಗಳನ್ನು ಪ್ರಾರ್ಥನೆಯಂತೆ ಪಠಿಸಬೇಕು ಎಂದು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.










