ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ…

42
firstsuddi

ಮೈಸೂರು: ಹುಲಿ ದಾಳಿಗೆ ವ್ಯಕ್ತಿಯೊಬ್ಬ ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಕಾಡಬೇಗೂರು ಕಾಲೋನಿಯಲ್ಲಿ ನಡೆದಿದೆ.

ಮೃತನನ್ನು ಬಿ.ಮಟಗೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯಕ್ (42) ಎಂದು ಗುರುತಿಸಲಾಗಿದೆ. ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ನಿನ್ನೆ ದನ ಮೇಯಿಸುವಾಗ ಹುಲಿ, ದನಗಳ ಮೇಲೆ ದಾಳಿ ಮಾಡಿತ್ತು. ಆಗ ದನಗಳು ಹುಲಿಗೆ ಸಿಗದೆ ಚೆಲ್ಲಾ ಪಿಲ್ಲಿಯಾಗಿ ಓಡಿದವು. ಆಗ ಹುಲಿ, ಬಾಲಾಜಿ ಮೇಲೆ ದಾಳಿ ನಡೆಸಿತ್ತು. ಬಳಿಕ ಮೃತದೇಹ ಕಾಡಿಗೆ ಎಳೆದುಕೊಂಡು ಹೋಗಿತ್ತು. ಇದನ್ನು ಗಮನಿಸಿದ ಅಕ್ಕ ಪಕ್ಕದ ಜಮೀನಿನವರು ಕೂಗಾಡಿದ್ದು ಶಬ್ದ ಕೇಳಿ ಮೃತದೇಹ ಬಿಟ್ಟು ಹುಲಿ ಓಡಿ ಹೋಗಿತ್ತು. ಹುಲಿಯು ರೈತನ ಒಂದು ಕಾಲು, ದೇಹದ ಕೆಲ ಭಾಗ ತಿಂದು ಹಾಕಿದೆ. ಮತ್ತೆ ಅದೇ ಸ್ಥಳಕ್ಕೆ ಹುಲಿ ಬರುವ ಸಾಧ್ಯತೆ ಹಿನ್ನೆಲೆ ಅರಣ್ಯ ಇಲಾಖೆ ಅಲರ್ಟ್ ಆಗಿದೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದೆ.

ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ಜಾನುವಾರುಗಳ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು.

ಇನ್ನು ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.